HomeEntertainment'ಭೀಮ' ಚಿತ್ರಕ್ಕೆ ಸಿಕ್ಕಿತು ಅದ್ಭುತ ಪ್ರತಿಕ್ರಿಯೆ

‘ಭೀಮ’ ಚಿತ್ರಕ್ಕೆ ಸಿಕ್ಕಿತು ಅದ್ಭುತ ಪ್ರತಿಕ್ರಿಯೆ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ಭೀಮಾ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ದುನಿಯಾ ವಿಜಯ್ ಅವರ ಮಾಸ್ ಡೈಲಾಗ್ ಗಳಿಗೆ ಫಿದಾ ಆಗಿದ್ದು, ರಾಜ್ಯದೆಲ್ಲೆಡೆ ಭೀಮ ಹವಾ ಜೋರಾಗಿದೆ.

ಈ ಚಿತ್ರವನ್ನು ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ ಫಿಲಂಸ್ ಬ್ಯಾನರ್ ನಲ್ಲಿ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿದ್ದು ದುನಿಯಾ ವಿಜಯ್ ಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ. ಪ್ರಿಯಾ ಶತಮರ್ಶನ್  ಕಾಕ್ರೋಚ್ ಸುಧಿ, ಡ್ರ್ಯಾಗನ್ ಮಂಜು, ರಂಗಾಯಣ ರಘು, ಅಚ್ಯುತ್ ಕುಮಾರ್, ಕಲ್ಯಾಣಿ ರಾಜು, ಉಳಿದ ತಾರಾಂಗಣದಲ್ಲಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ಶಿವ ಸೇನಾ ಅವರ ಛಾಯಾಗ್ರಹಣವಿದ್ದು, ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು, ಮಹೇಶ್ ಕುಮಾರ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular