ಐದು ವಾರ ಪೂರೈಸಿದ ‘ಕಾಟೇರ’ ಸಿನಿಮಾ

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಿಡುಗಡೆ ಆದಾಗಿನಿಂದ ಇಂದಿನವರೆಗೂ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಫ್ಯಾಮಿಲಿ ಸಮೇತ ಬಂದು ವೀಕ್ಷಣೆ ಮಾಡುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ 29 ರಂದು ರಾಜ್ಯದ್ಯಂತ ತೆರೆಕಂಡಿದ್ದ ಕಾಟೇರ ಚಿತ್ರ ಐದು ವಾರಗಳನ್ನು ಪೂರೈಸಿದೆ.

ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ಜಡೇಶ್ ಕುಮಾರ್ ಹಂಪಿ ಕಥೆ ಬರೆದಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜೋಡಿ ಆಗಿ ಮಾಲಾಶ್ರೀ ಪುತ್ರಿ ಆರಾಧನಾ ಅಭಿನಯಿಸಿದ್ದಾರೆ. ಶೃತಿ, ಜಗಪತಿ ಬಾಬು, ಕುಮಾರ್ ಗೋವಿಂದ್, ವಿನೋದ್ ಕುಮಾರ್, ಮಾಸ್ಟರ್ ರೋಹಿತ್, ಅವಿನಾಶ್, ಶ್ರೀನಿವಾಸ ಮೂರ್ತಿ, ಹಾಗೂ ಪದ್ಮ ವಸಂತಿ ಉಳಿದ ಪಾತ್ರವರ್ಗದಲ್ಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read