ಹಾಸನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ : ಸಚಿವ ಕೃಷ್ಣಭೈರೇಗೌಡ

ಹಾಸನ : ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.

ಹಾಸನ ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿ 373 ರ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನ ಮೃತಪಟ್ಟಿದ್ದಾರೆ. ದುರಂತಕ್ಕೆ ಟ್ರಕ್ ಚಾಲಕ ಭುವನ್ ಅವರ ಬೇಜವಾಬ್ದಾರಿ ತನವೇ ಕಾರಣ. ಅಲ್ಲದೆ, ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ, ಹೀಗಾಗಿ ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ ಎಂದರು.

ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಾಟೀಲ್ ಅವರೂ ಸಹ ಪತ್ರ ಬರೆಯಲಿದ್ದಾರೆ. ಅಲ್ಲದೆ, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆಯೂ ಪತ್ರದಲ್ಲಿ ಒತ್ತಾಯಿಸಲಾಗುವುದು ಎಂದರು.

ಹಾಸನ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ. ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ KSRP ತುಕಡಿ ನೇಮಿಸಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read