HomeKarnatakaಆನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ಬಾಕಿ ₹15 ಲಕ್ಷ ಪರಿಹಾರ ವಾರದೊಳಗೆ ವಿತರಣೆ : ಸಚಿವ...

ಆನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ಬಾಕಿ ₹15 ಲಕ್ಷ ಪರಿಹಾರ ವಾರದೊಳಗೆ ವಿತರಣೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದ ಕಾಡಿನಂಚಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷದ ಕುರಿತು ಇಂದು ವಿಧಾನಪರಿಷತ್ತಿನಲ್ಲಿ ಮಹತ್ವದ ಚರ್ಚೆ ನಡೆಯಿತು. ಈ ವೇಳೆ ಸರ್ಕಾರದ ಪರವಾಗಿ ಮಾತನಾಡಿದ ಪ್ರತಿನಿಧಿಗಳು, ಮಾನವ ಜೀವ ಅಮೂಲ್ಯವಾಗಿದ್ದು, ಸಂಘರ್ಷ ನಿಯಂತ್ರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದರು.

ಪರಿಹಾರ ಧನ ಘೋಷಣೆ

ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಈಗಾಗಲೇ ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆ. ನಿಯಮದನ್ವಯ ನೀಡಬೇಕಾದ ಉಳಿದ ₹15 ಲಕ್ಷ ಮೊತ್ತವನ್ನು ಮುಂದಿನ ಒಂದು ವಾರದೊಳಗೆ ಸಂತ್ರಸ್ತ ಕುಟುಂಬಗಳಿಗೆ ತಲುಪಿಸಲಾಗುವುದು ಎಂದು ಸದನಕ್ಕೆ ತಿಳಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನೆ–ಮಾನವ ಸಂಘರ್ಷವನ್ನು ಶಾಶ್ವತವಾಗಿ ನಿಯಂತ್ರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. 2025–26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಹಾಗೂ ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ ರೈಲು ಹಳಿ ತಡೆಗೋಡೆ (Railway Barricade) ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಜೊತೆಗೆ ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಹಾಗೂ ಆನೆ ಕಾರ್ಯಪಡೆಗಳ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular