HomeKarnatakaBIG NEWS : ‘ಕುಮಾರಸ್ವಾಮಿ ವಿದ್ಯುತ್ ಕಳ್ಳ’ ಎಂದು ಅಂಟಿಸಿದ್ದ ಪೋಸ್ಟರ್ ತೆರವುಗೊಳಿಸಿದ ಪೊಲೀಸರು

BIG NEWS : ‘ಕುಮಾರಸ್ವಾಮಿ ವಿದ್ಯುತ್ ಕಳ್ಳ’ ಎಂದು ಅಂಟಿಸಿದ್ದ ಪೋಸ್ಟರ್ ತೆರವುಗೊಳಿಸಿದ ಪೊಲೀಸರು

ಬೆಂಗಳೂರು : ಕುಮಾರಸ್ವಾಮಿ ನಿವಾಸಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ವಿಚಾರ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಕಾಂಪೌಂಡ್ಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ..!’ ಎಂದು ಪೋಸ್ಟರ್ ಹಾಕಲಾಗಿತ್ತು, ಇದೀಗ ಈ ಪೋಸ್ಟರ್ ತೆರವುಗೊಳಿಸಲಾಗಿದೆ.

ಜೆ.ಪಿ.ಭವನದ ಕಾಂಪೌಂಡ್ಗೆ ಕಿಡಿಗೇಡಿಗಳು ಪೋಸ್ಟರ್ ಅಂಟಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು ನಂತರ ಪೋಸ್ಟರ್ಗಳ ತೆರವು ಮಾಡಿದ್ದಾರೆ . ಶ್ರೀರಾಂಪುರ ಠಾಣೆ ಪೊಲೀಸರು ಪೋಸ್ಟರ್ಗಳನ್ನು ತೆರವುಗೊಳಿಸಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್ಗಳನ್ನು ಅಂಟಿಸಿ ವ್ಯಂಗ್ಯವಾಡಲಾಗುತ್ತಿದೆ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ ವಿಜಯೇಂದ್ರ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular