HomeKarnatakaBIG BREAKING: ರೇವ್ ಪಾರ್ಟಿ ಪ್ರಕರಣ; ತೆಲುಗು ನಟಿ ಹೇಮಾ ಅರೆಸ್ಟ್

BIG BREAKING: ರೇವ್ ಪಾರ್ಟಿ ಪ್ರಕರಣ; ತೆಲುಗು ನಟಿ ಹೇಮಾ ಅರೆಸ್ಟ್

ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಈ ಪಾರ್ಟಿಯಲ್ಲಿ ಹಾಜರಾಗಿದ್ದರು ಎನ್ನಲಾದ ತೆಲುಗು ನಟಿ ಹೇಮಾರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಟಿ ಹೇಮಾ ಹೆಸರು ಕೇಳಿ ಬಂದಾಗ ಆಕೆ ಆ ಸಂದರ್ಭದಲ್ಲಿ ನಾನು ಹೈದರಾಬಾದ್ ಫಾರ್ಮ್ ಹೌಸ್ ನಲ್ಲಿ ಇದ್ದೆ ಎಂದು ಹೇಳಿದ್ದರು.

ಆದರೆ ಸಿಸಿಬಿ ಪೊಲೀಸರು ತಮಗೆ ಸಿಕ್ಕ ಖಚಿತ ಸಾಕ್ಷ್ಯಾಧಾರಗಳ ಮೇಲೆ ಹಾಗೂ ವೈದ್ಯಕೀಯ ಪರೀಕ್ಷೆ ಮೊದಲಾದವನ್ನು ಪರಿಗಣಿಸಿ ಹೇಮಾ ವಿಚಾರಣೆಗೆ ಹಾಜರಾದ ವೇಳೆ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular