‘ಶಾಲಾ ಶೌಚಾಲಯ’ ಸ್ವಚ್ಛಗೊಳಿಸುವ ಹೊಣೆ ‘SDMC’ ಗೆ, ಶೀಘ್ರ ಆದೇಶ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ, ಶಾಲಾ ಶೌಚಾಲಯ’ ಸ್ವಚ್ಛಗೊಳಿಸುವ ಹೊಣೆ ‘SDMC’ ಗೆ ನೀಡಿ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ  ತಾಲೂಕಿನ ಕುಪ್ಪಳ್ಳಿಯಲ್ಲಿ  ಮಾತನಾಡಿದ ಸಚಿವ ಮಧು ಬಂಗಾರಪ್ಪ ‘ಶಾಲೆಗಳಲ್ಲಿ ಶೌಚಾಲಯವನ್ನು ಮಕ್ಕಳಿಂದ ಕ್ಲೀನ್ ಮಾಡಿಸೋದು ಸಹಿಸೋದಿಲ್ಲ. ಮುಂದೆ ಇಂತಹ ಘಟನೆಗಳು ಮರುಳಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’.ಶಾಲೆಯ ಮಕ್ಕಳಿಂದ ಇಂತಹ ಕೆಲಸ ಮಾಡಬಾರದು, ಇದು ಇಲಾಖೆಗೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು ಸಂಬಂಧ ಕ್ರಮವಹಿಸೋದು ಕೇವಲ ಶಿಕ್ಷಕರ ಹೊಣೆಯಷ್ಟೇ ಅಲ್ಲ. ಶಾಲಾ ಅಭಿವೃದ್ಧಿ ಉಸ್ತುವಾರಿ ಸಮಿತಿಯ ಹೊಣೆ ಕೂಡ ಹೌದು. ಶಾಲಾ ಶೌಚಾಲಯ ಸ್ವಚ್ಛಗೊಳಿಸುವ ಹೊಣೆಗಾರಿಗೆ ‘SDMC’ಗೆ ನೀಡಿ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read