‘RSS’ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ. ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು. ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದರು.

ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ. ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read