HomeEntertainment'ದೇವರ' ಚಿತ್ರದ ಎರಡನೇ ಹಾಡು ರಿಲೀಸ್

‘ದೇವರ’ ಚಿತ್ರದ ಎರಡನೇ ಹಾಡು ರಿಲೀಸ್

ಜೂನಿಯರ್ ಎನ್ಟಿಆರ್ ನಟನೆಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಚಿತ್ರದ 2ನೇ  ಗೀತೆಯನ್ನು ಟಿ ಸಿರೀಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಯಲ್ಲಿ ಈ ರೋಮ್ಯಾಂಟಿಕ್ ಹಾಡನ್ನು ರಿಲೀಸ್ ಮಾಡಲಾಗಿದ್ದು, ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ.  ‘ಸ್ವಾತಿಮುತ್ತೇ ಸಿಕ್ಕಂಗೈತೆ’ ಎಂಬ ಕನ್ನಡ ಹಾಡಿಗೆ ವರದರಾಜ್ ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್,  ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಸೇರಿದಂತೆ ಬಾಬಿ ಡಿಯೋಲ್, ಶ್ರೀಕಾಂತ್, ಶ್ರುತಿ ಮರಾಠೆ, ನರೇನ್, ಕಲೈಯರಸನ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್, ತೆರೆ ಹಂಚಿಕೊಂಡಿದ್ದು, ಸುಧಾ ಆರ್ಟ್ಸ್ ಹಾಗೂ ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಂದಮೂರಿ ಕಲ್ಯಾಣ್ ರಾಮ್ ನಿರ್ಮಾಣ ಮಾಡಿದ್ದಾರೆ. ಶ್ರೀ ಕಾರ್ ಪ್ರಸಾದ್ ಅವರ ಸಂಕಲನವಿದ್ದು, ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular