HomeEntertainmentನಾಳೆ ಬಿಡುಗಡೆಯಾಗಲಿದೆ 'ಕಂಡೋರ್ ಮನೆ ಕಥೆ' ಚಿತ್ರದ 'ಸೋಂಬೇರಿ' ಹಾಡು

ನಾಳೆ ಬಿಡುಗಡೆಯಾಗಲಿದೆ ‘ಕಂಡೋರ್ ಮನೆ ಕಥೆ’ ಚಿತ್ರದ ‘ಸೋಂಬೇರಿ’ ಹಾಡು

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಸೂರಜ್ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ಕಲಾವಿದನಾಗಿ ಕಾಣಿಸಿಕೊಂಡರು.

ಸೂರಜ್ ಇದೀಗ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಕಂಡೋರ್ ಮನೆ ಕಥೆ’ ಚಿತ್ರ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ”ಸೋಂಬೇರಿ” ಎಂಬ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.

ಪ್ರಣವ್ ಶೆಟ್ಟಿ ನಿರ್ದೇಶನದ ಈ ಚಿತ್ರವನ್ನು ನಮನ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ಮಂಜುಳಾ ನಿರ್ಮಾಣ ಮಾಡಿದ್ದಾರೆ. ಜಾನ್ ಕೆನಡಿ ಸಂಗೀತ ಸಂಯೋಜನೆ ನೀಡಿದ್ದು, ಕಿರಣ್ ಗಜ ಛಾಯಾಗ್ರಹಣವಿದೆ.ಈಗಾಗಲೇ ಈ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular