BREAKING : ನಗರ ಪ್ರದೇಶದಲ್ಲೂ ಆಶಾ ಕಾರ್ಯಕರ್ತೆಯರ ನೇಮಕಾತಿಗೆ ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ ಶಿಪಾರಸ್ಸು.!

ಬೆಂಗಳೂರು :   ನಗರ ಪ್ರದೇಶದಲ್ಲೂ ಆಶಾ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಶಿಪಾರಸ್ಸು ಮಾಡಿದೆ. ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕೋರಿ ಆರೋಗ್ಯ ಇಲಾಖೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಶಿಪಾರಸ್ಸು ಮಾಡಿದೆ.

ಆಶಾ ಕಾರ್ಯಕರ್ತೆಯರು ಸಮುದಾಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು, ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಮಹಿಳೆಯರಿಗೆ ಸಲಹೆ/ಮಾಹಿತಿ ನೀಡುವುದು. ಆರೋಗ್ಯ ಸೇವೆಗಳನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುವುದು ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಇವರ ಪ್ರಮುಖ ಕರ್ತವ್ಯವಾಗಿರುತ್ತದೆ. ಇವರು ಸಮುದಾಯ ಮತ್ತು ಆರೋಗ್ಯ ಕೇಂದ್ರಗಳ ನಡುವಿನ ಪ್ರಮುಖ ಸಂಪರ್ಕವಾಗಿ ಕಾರ್ಯನಿರ್ವಹಿಸುತ್ತಾರೆ.

ಪ್ರಸ್ತುತ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರ ಅಲಭ್ಯತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಸಾಂಪ್ರದಾಯಿಕ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಮತ್ತು ಸರ್ಕಾರದ ಉದ್ದೇಶಿತ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಇವರ ಕೊಡುಗೆಯು ಪ್ರಮುಖವಾಗಿರುತ್ತದೆ. ಆಶಾ ಕಾರ್ಯಕರ್ತೆಯರನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ಅವರ ಕಾರ್ಯನಿರ್ವಹಣೆಯನ್ನು ಉತ್ತೇಜಿಸುವ ಆವಶ್ಯಕತೆ ಇರುತ್ತದೆ.

ಆದ್ದರಿಂದ ಗ್ರಾಮೀಣ ಪ್ರದೇಶಗಳ ಮಾದರಿಯಲ್ಲಿಯೇ ನಗರ ಪ್ರದೇಶಗಳಲ್ಲಿಯೂ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸುವಂತೆ ಆಯೋಗವು ಶಿಫಾರಸ್ಸನ್ನು ಮಾಡುತ್ತಿದೆ. ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿದೆ .

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read