ಸಂಕಷ್ಟದಲ್ಲಿರುವ ಕೇರಳಕ್ಕೆ ಸಹಾಯದ ಹಸ್ತ ಚಾಚಿದ ರಾಜ್ಯ ಸರ್ಕಾರ ; ಸಹಾಯವಾಣಿ ಬಿಡುಗಡೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿರುವ ರಾಜ್ಯ ಸರ್ಕಾರವು ಕೇರಳ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿರಲ್ಲಿದೆ.

ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು ಕಾರಣರಾಗಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read