1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು : 1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ 1ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ (ದ್ವಿ ಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ.

ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳು ಸೇರಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read