BIG NEWS : ರಾಜ್ಯ ಸರ್ಕಾರ ಸುಳ್ಳು ಕೇಸ್ ದಾಖಲಿಸಿ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ : ಆರ್. ಅಶೋಕ್ ಕಿಡಿ

ಬೆಂಗಳೂರು : ರಾಜ್ಯ ಸರ್ಕಾರ ಸುಳ್ಳು ಕೇಸ್ ದಾಖಲಿಸಿ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆಶೋಕ್ ‘’ 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ@INCKarnatakaಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ@BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ.

ಸಿಎಂ@siddaramaiahನವರೇ ಹಾಗೂ ಡಿಸಿಎಂ@DKShivakumar ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read