ಹಾಲಿನ ಉತ್ಪಾದನೆಯಲ್ಲಿ ರಾಜ್ಯ ಶೀಘ್ರವೇ ಮೊದಲ ಸ್ಥಾನಕ್ಕೆ: ಸಿಎಂ ಸಿದ್ಧರಾಮಯ್ಯ

ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳ-2025 ರಲ್ಲಿ ಮಾತನಾಡಿದ ಸಿಎಂ, ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ. ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ತಿಳಿಸಿದ್ದಾರೆ.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು, ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಅವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕೃಷಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ. ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ ಎಂದರು.

ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ. ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ.90 ಪರಿಹಾರ ನೀಡಿ, ಪ್ರಗತಿಯ ವರದಿ ನೀಡಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಕೃಷಿ ಮೇಳದಲ್ಲಿ ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರದಾನ ಮಾಡಿ, ಕೃಷಿ ಸಾಧಕರನ್ನು ಗೌರವಿಸಲಾಯಿತು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read