ರಾಜ್ಯದ ಗ್ರಾ.ಪಂ. ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ʻಕನಿಷ್ಠ ವೇತನʼ ಪಾವತಿಗೆ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪಂಚಾಯತ್ ರಾಜ್ ಆಯುಕ್ತಾಲಯ ಸುತ್ತೋಲೆ ಪ್ರಕಾರ,  ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು ಎಂದು ಸೂಚನೆ ನೀಡಿದೆ.

ನಿಯಮಾನುಸಾರ ನೇಮಕಗೊಂಡ ಸಿಬ್ಬಂದಿಗೆ ಪ್ರಸ್ತುತ ಪಾವತಿಸುತ್ತಿರುವ ವೇತನ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಟ ವೇತನಕ್ಕಿಂತ ಹೆಚ್ಚಾಗಿದ್ದಲ್ಲಿ ಸದರಿ ವೇತನದಲ್ಲಿ ಸರ್ಕಾರದಿಂದ ಬಿಡುಗಡೆಗೊಳಿಸಿದ ಮೊತ್ತದಲ್ಲಿ ಕನಿಷ್ಟ ವೇತನ ಮಾತ್ರ ಪಾವತಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read