HomeEntertainmentಇಂದು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಿದೆ 'ರಾಯಲ್' ಚಿತ್ರ ತಂಡ

ಇಂದು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಿದೆ ‘ರಾಯಲ್’ ಚಿತ್ರ ತಂಡ

ದಿನಕರ್ ಎಸ್ ನಿರ್ದೇಶನದ ವಿರಾಟ್ ಅಭಿನಯದ ‘ರಾಯಲ್’ ಚಿತ್ರ ಈಗಾಗಲೇ ತನ್ನ ಹಾಡುಗಳಿಂದಲೇ ಎಲ್ಲರ ಗಮನ ಸೆಳೆದಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ರಾಯಲ್ ಚಿತ್ರತಂಡ ಇಂದು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಚಿತ್ರದಲ್ಲಿ ವಿರಾಟ್ ಗೆ ಜೋಡಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದು, ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಗೋಪಾಲ್ ದೇಶ್ಪಾಂಡೆ, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಜಯಣ್ಣ ಫಿಲಂಸ್ ಬ್ಯಾನರ್ ನಲ್ಲಿ ಜಯಣ್ಣ- ಭೋಗೇಂದ್ರ ನಿರ್ಮಾಣ ಮಾಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಸಂಕೇತ್ ಛಾಯಾಗ್ರಹಣ ರಘು ನಿಡುವಳ್ಳಿ ಸಂಭಾಷಣೆ: ಹಾಗೂ ಡಾ. ಕೆ. ರವಿ ವರ್ಮ ಅವರ ಸಾಹಸ ನಿರ್ದೇಶನವಿದೆ. ಚರಣ್ರಾಜ್ ಎಂ ಆರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular