HomeKarnataka‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ : ವಿವಾದ ಸೃಷ್ಟಿಸಿದ ವಸತಿ ಶಾಲೆಯಲ್ಲಿನ ಈ ‘ಬರಹ’

‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ : ವಿವಾದ ಸೃಷ್ಟಿಸಿದ ವಸತಿ ಶಾಲೆಯಲ್ಲಿನ ಈ ‘ಬರಹ’

ಬೆಂಗಳೂರು : ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’…! ಇದೇನಿದು ಅಂತ ಯೋಚಿಸುತ್ತಿದ್ದೀರಾ..? ವಸತಿ ಶಾಲೆಯಲ್ಲಿನ ಈ ಬರಹ ಈಗ ವಿವಾದಕ್ಕೆ ಕಾರಣವಾಗಿದೆ.

ಹೌದು. ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ತಿದ್ದುಪಡಿ ಮಾಡಲಾಗಿದೆ. ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಬರಹವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’… ಎಂದು ತಿದ್ದಲಾಗಿದೆ.

ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಹೀಗೆ ಬರೆಯಲಾಗಿದೆ. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪೋಷಕರು ಪ್ರಶ್ನೆ ಮಾಡಲಿ ಎಂದು ಹೀಗೆ ಬರೆದಿದ್ದೇವೆ ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಈ ಬರಹ ಕಂಡು ಬಂದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular