ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ‘ಗೇಮ್ ಚೇಂಜರ್’ ಚಿತ್ರದ ಟೀಸರ್ ಹಾಗೂ ಹಾಡುಗಳು ಈಗಾಗಲೇ ಯೂಟ್ಯೂಬ್ ನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, ಮೂರನೇ ಹಾಡು ಬಿಡುಗಡೆಗೆ ಸಿದ್ಧವಾಗಿದೆ. ಇದೇ ನವೆಂಬರ್ 28ರಂದು ಈ ಹಾಡನ್ನು ವೀಕ್ಷಿಸಬಹುದಾಗಿದೆ.
ಈ ಚಿತ್ರವನ್ನು ದಿಲ್ ರಾಜು ಹಾಗೂ ಶಿರೀಶ್ ನಿರ್ಮಾಣ ಮಾಡಿದ್ದು, ರಾಮ್ ಚರಣ್ ಮತ್ತು ಕಿಯಾರ ಅಡ್ವಾಣಿ ಸೇರಿದಂತೆ ಅಂಜಲಿ, ಸಮುದ್ರಕನಿ, ಎಸ್ ಜೆ ಸೂರ್ಯ, ಶ್ರೀಕಾಂತ್, ಸುನೀಲ್ ಬಣ್ಣ ಹಚ್ಚಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ತಮನ್ ಎಸ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಶಮೀರ್ ಮುಹಮ್ಮದ್ ಅವರ ಸಂಕಲನ, ಎಸ್ ತಿರುನಾವುಕ್ಕರಸು ಛಾಯಾಗ್ರಹಣ, ಸಾಯಿ ಮಾಧವ್ ಬುರ್ರಾ ಸಂಭಾಷಣೆ, ಹಾಗೂ ಪ್ರಭುದೇವ, ಗಣೇಶ್ ಆಚಾರ್ಯ, ನೃತ್ಯ ನಿರ್ದೇಶನವಿದೆ.