HomeEntertainmentಕೋಮಲ್ ಅಭಿನಯದ 25ನೇ ಚಿತ್ರದ ಟೈಟಲ್ ರಿವೀಲ್

ಕೋಮಲ್ ಅಭಿನಯದ 25ನೇ ಚಿತ್ರದ ಟೈಟಲ್ ರಿವೀಲ್

ಹಾಸ್ಯ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ ನಲ್ಲಿ ತಮ್ಮದೇ ಬ್ರಾಂಡ್ ಹೊಂದಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಅಭಿನಯದ ಇಪ್ಪತ್ತೈದನೇ ಚಿತ್ರದ ಟೈಟಲ್ ಬಿಡುಗಡೆ ಮಾಡುವ ಮೂಲಕ ಬಂಡೆ ಮಹಾಕಾಳಿ ದೇವಾಲಯದಲ್ಲಿ ಮುಹೂರ್ತ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ. ಈ ಚಿತ್ರಕ್ಕೆ ‘ಕುಟೀರ’ ಎಂಬ ಟೈಟಲ್ ಇಡಲಾಗಿದೆ.

ಈ ಚಿತ್ರವನ್ನು ಅನುಪ್ ಆಂಥೋನಿ ನಿರ್ದೇಶಿಸುತ್ತಿದ್ದು, ಶ್ರೀ ಕಂಸಾಳೆ ಫಿಲಂಸ್ ಬ್ಯಾನರ್ ನಲ್ಲಿ ಮಧು ಮರಿಸ್ವಾಮಿ ನಿರ್ಮಾಣ ಮಾಡಲಿದ್ದಾರೆ. ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಕೋಮಲ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಎನ್ ಎಂ ವಿಶ್ವ ಸಂಕಲನ, ರವಿವರ್ಮ‌ ಹಾಗೂ ವಿಕ್ರಂ ಸಾಹಸ ನಿರ್ದೇಶನ, ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಭರತ್ ಬಿ.ಜೆ. ಸಂಗೀತ ಸಂಯೋಜನೆ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular