ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ನರ್ತನ್ ನಿರ್ದೇಶನದ ಬಹು ನಿರೀಕ್ಷಿತ ಭೈರತಿ ರಣಗಲ್ ಚಿತ್ರದ ಟೈಟಲ್ ಟ್ರ್ಯಾಕ್ ಇದೇ ಆಗಸ್ಟ್ ಹತ್ತರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ತಮ್ಮ ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಶಿವರಾಜ್ ಕುಮಾರ್ ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸುತ್ತಿದ್ದಾರೆ. ಆಕಾಶ್ ಹಿರೇಮಠ ಸಂಕಲನ, ನವೀನ್ ಕುಮಾರ್ ಛಾಯಾಗ್ರಾಹಣ, ಹಾಗೂ ರವಿ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದಾರೆ. ದಿಲೀಪ್ ಸುಬ್ಬರಾಯನ್ ಹಾಗೂ ಚೇತನ್ ಡಿಸೋಜಾ ಅವರ ಸಾಹಸ ನಿರ್ದೇಶನವಿದೆ.
https://twitter.com/aanandaaudio/status/1821165919978303768