HomeEntertainmentಸೆಪ್ಟೆಂಬರ್ 25ಕ್ಕೆ ಬಿಡುಗಡೆಯಾಗಲಿದೆ 'ಗರಡಿ' ಚಿತ್ರದ ಟೈಟಲ್ ಟ್ರ್ಯಾಕ್

ಸೆಪ್ಟೆಂಬರ್ 25ಕ್ಕೆ ಬಿಡುಗಡೆಯಾಗಲಿದೆ ‘ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್

ಯೋಗರಾಜ್ ಭಟ್ ನಿರ್ದೇಶನದ ಯಶಸ್ ಸೂರ್ಯ ಅಭಿನಯದ ಬಹುನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ ಹತ್ತರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಇದಕ್ಕೂ ಮುಂಚೆ ಚಿತ್ರತಂಡ ಟೈಟಲ್ ಟ್ರ್ಯಾಕ್ ಒಂದನ್ನು ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಸರಿಗಮಪ ಕನ್ನಡ ಯುಟ್ಯೂಬ್ ಚಾನೆಲ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದಾಗಿದೆ.

ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಸೌಮ್ಯ ಫಿಲಂಸ್ ಬ್ಯಾನರ್ ನಲ್ಲಿ ಶ್ರೀಮತಿ ವನಜ ಪಾಟೀಲ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಯಶಸ್ ಸೂರ್ಯ,  ಸೇರಿದಂತೆ ಸೋನಾಲ್ ಮೊಂಟೆರೊ, ಬಿಸಿ ಪಾಟೀಲ್,  ಸುಜಯ್ ಬೇಲೂರು ತೆರೆ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular