HomeEntertainmentಇಂದು ಬಿಡುಗಡೆಯಾಗಲಿದೆ ಚಿಲ್ಲಿ ಚಿಕನ್ ಚಿತ್ರದ ಟ್ರೈಲರ್

ಇಂದು ಬಿಡುಗಡೆಯಾಗಲಿದೆ ಚಿಲ್ಲಿ ಚಿಕನ್ ಚಿತ್ರದ ಟ್ರೈಲರ್

ಇತ್ತೀಚಿಗಷ್ಟೇ ತನ್ನ ಟೀಸರ್ ಮೂಲಕ ಗಮನ ಸೆಳೆದಿದ್ದ ಪ್ರತೀಕ್ ಪ್ರಜೋಶ್ ನಿರ್ದೇಶನದ ‘ಚಿಲ್ಲಿ ಚಿಕನ್’ ಚಿತ್ರದ ಟ್ರೈಲರ್ ಇಂದು ಸಂಜೆ 6:30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರ ತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.

ಈ ಚಿತ್ರವನ್ನು ಮೆಟಾನೋಯಾ ಸ್ಟುಡಿಯೋಸ್ ಬ್ಯಾನರ್ ನಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ನಿರ್ಮಾಣ ಮಾಡಿದ್ದು, ಬಿ.ವಿ.ಶ್ರುಂಗಾ, ಬಿಜೌ ತಂಗ್ಜಮ್, ಜಿಂಪಾ ಸಾಂಗ್ಪೋ, ಹರಿಣಿ ಸುಂದರರಾಜನ್, ವಿಕ್ಟರ್ ತೌಡಂ ನಿತ್ಯಶ್ರೀ, ಪದ್ಮಜಾ ರಾವ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಸಿದ್ದಾರ್ಥ್ ಸುಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular