ಆಗಸ್ಟ್ ಏಳಕ್ಕೆ ರಿಲೀಸ್ ಆಗಲಿದೆ ‘ಪೌಡರ್’ ಟ್ರೈಲರ್

ಆಗಸ್ಟ್ 23 ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ದೂದ್ ಪೇಡ ದಿಗಂತ್ ಅಭಿನಯದ ‘ಪೌಡರ್’ ಚಿತ್ರದ ಟ್ರೈಲರ್ ಇದೇ ಆಗಸ್ಟ್ ಏಳರಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರೋಮ್ಯಾಂಟಿಕ್ ಕಾಮಿಡಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ದಿಗಂತ್, ಧನ್ಯ ರಾಮ್ ಕುಮಾರ್, ಶರ್ಮಿಳಾ ಮಾಂಡ್ರೆ, ಮುಖ್ಯ ಭೂಮಿಕೆಯಲ್ಲಿದ್ದು, ರಂಗಾಯಣ ರಘು, ಅನಿರುದ್ಧ ಆಚಾರ್ಯ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ಹುಲಿ ಕಾರ್ತಿಕ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೆ ಆರ್ ಜಿ ಸ್ಟೂಡಿಯೋಸ್ ಬ್ಯಾನರ್ ನಡಿ ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಮಣ್ಯಂ ಬಂಡವಾಳ ಹೂಡಿದ್ದಾರೆ. ವಾಸುಕಿ ವೈಭವ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, n. ಕೃಷ್ಣ ಮತ್ತು ಗೌತಮ್ ಪಲ್ಲಕ್ಕಿ ಅವರ ಸಂಕಲನ, ತ್ರಿಲೋಕ್ ತ್ರಿವಿಕ್ರಮ್ ಅವರ ಸಂಭಾಷಣೆ, ಹಾಗೂ ಅರ್ಜನ್ ರಾಜ್ ಸಾಹಸ ನಿರ್ದೇಶನವಿದೆ.

https://twitter.com/aanandaaudio/status/1819733774768443442

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read