ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಪ್ರಜ್ವಲ್ ದೇವರಾಜ್ ಸದ್ಯ ‘ರಾಕ್ಷಸ’ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ರಾಕ್ಷಸ ಚಿತ್ರದ ಟ್ರೈಲರ್ ನಿನ್ನೆಯಷ್ಟೇ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ.
ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸಿದ್ದು, ಸಾನ್ವಿ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ದೀಪು ಬಿ ಎಸ್ ನಿರ್ಮಾಣ ಮಾಡಿದ್ದಾರೆ. ನವೀನ್ ಹಾಗೂ ಮಾನಸ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್, ಸೋಮಶೇಖರ್, ಶ್ರೀಧರ್, ಅರುಣ್ ರಾಥೋಡ್ ಹಾಗೂ ಗೌತಮ್ ಪ್ರಮುಖ ಪಾತ್ರದಲ್ಲಿದ್ದಾರೆ. ನೋಬಿನ್ ಪಾಲ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ವಿನೋದ್ ಮತ್ತು ರಿಯಲ್ ಸತೀಶ್ ಅವರ ಸಾಹಸ ನಿರ್ದೇಶನ, ಸಿ ರವಿ ಚಂದ್ರನ್ ಸಂಕಲನ, ಜಬಿನ್ ಜೋಕಾಬ್ ಛಾಯಾಗ್ರಹಣವಿದೆ.