ಜನವರಿ 18ಕ್ಕೆ ಬಿಡುಗಡೆಯಾಗಲಿದೆ ‘ಪ್ರಣಯಂ’ ಚಿತ್ರದ ಟ್ರೈಲರ್

‘ಬಿಚ್ಚುಗತ್ತಿ’ ಖ್ಯಾತಿಯ ರಾಜವರ್ಧನ್ ನಟನೆಯ ‘ಪ್ರಣಯಂ’ ಚಿತ್ರದ ಟ್ರೈಲರ್ ಜನವರಿ 18ರಂದು ಯೂಟ್ಯೂಬಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಲವ್ ಸಸ್ಪೆನ್ಸ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಸಿನಿಮಾವನ್ನು ಎಸ್ ದತ್ತಾತ್ರೇಯ ನಿರ್ದೇಶಸಿದ್ದು, ಮಾನಸಿ ವೆಂಚರ್ಸ್ ಬ್ಯಾನರ್ ನಲ್ಲಿ ಪರಮೇಶ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರದಲ್ಲಿ ರಾಜವರ್ಧನ್ ಗೆ ಜೋಡಿಯಾಗಿ ನೈನಾ ಗಂಗೂಲಿ ನಾಯಕಿಯಾಗಿ ಅಭಿನಯಿಸಿದ್ದು, ಮನೋಮೂರ್ತಿ ಸಂಗೀತ, ಹಾಗೂ ವಿ ನಾಗೇಶ್ ಆಚಾರ್ಯ ಛಾಯಾಗ್ರಹಣವಿದೆ. ಮುಂದಿನ ತಿಂಗಳು ಫೆಬ್ರವರಿ 9 ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read