ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ2’ ಡಿಸೆಂಬರ್ ಐದರಂದು ವಿಶ್ವಾದ್ಯಂತ ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. ಈ ಚಿತ್ರದ ಟ್ರೈಲರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.
ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಪ್ರಿಯಾಮಣಿ, ಫಹಾದ್ ಫಾಸಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಸುನಿಲ್, ಅನಸೂಯಾ ಭಾರದ್ವಾಜ್, ಅಜಯ್ ಘೋಷ್, ಶ್ರೀತೇಜ್, ದಿವಿ ವಡ್ತ್ಯಾ, ಬ್ರಹ್ಮಾಜಿ, ದಯಾನಂದ ರೆಡ್ಡಿ, ಅಜಯ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಹಾಗೂ ಸುಕುಮಾರ್ ರೈಟಿಂಗ್ಸ್ ಬ್ಯಾನರ್ ನಲ್ಲಿ ನವೀನ್ ಯೆರ್ನೇನಿ, ಯಲಮಂಚಿಲಿ ರವಿಶಂಕರ್ ನಿರ್ಮಾಣ ಮಾಡಿದ್ದು, ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ನವೀನ್ ನೂಲಿ ಸಂಕಲನ, ಮಿರೋಸ್ಲಾ ಕುಬಾ ಬ್ರೋಜೆಕ್ ಅವರ ಛಾಯಾಗ್ರಹಣವಿದೆ.