ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಚಿತ್ರ ಇದೇ ಸೆಪ್ಟಂಬರ್ 27 ರಂದು ವಿಶ್ವಾದ್ಯಂತ ತೆರೆ ಕಾಣಲಿದ್ದು, ಇದರ ಟ್ರೈಲರ್, ನಿನ್ನೆಯಷ್ಟೇ ಸುಮಾರು 5 ಭಾಷೆಗಳಲ್ಲಿ ರಿಲೀಸ್ ಆಗಿದೆ. ಈ ಟೈಲರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ.
ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸೈಫ್ ಅಲಿ ಖಾನ್, ಜಾಹ್ನವಿ ಕಪೂರ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ, ನರೇನ್, ಕಲೈಯರಸನ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಯುವ ಸುಧಾ ಹಾಗೂ ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಂದಮೂರಿ ಕಲ್ಯಾಣ್ ರಾಮ್, ನಿರ್ಮಾಣ ಮಾಡಿದ್ದಾರೆ. ಶ್ರೀಕಾರ್ ಪ್ರಸಾದ್ ಸಂಕಲನ, ಹಾಗೂ ಆರ್. ರತ್ನವೇಲು ಛಾಯಾಗ್ರಹಣವಿದೆ. ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.