ಬೆಂಗಳೂರು : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಇದೀಗ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.
ಇಡೀ ದೇಶವೇ ಎದುರು ನೋಡುತ್ತಿರುವ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.
ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.
WATCH TRAILER
ರಿಷಬ್ ಶೆಟ್ಟಿ ಟ್ವೀಟ್
ಕನ್ನಡ ಜನತೆಗೆ ನಮಸ್ಕಾರ, ‘ಕಾಂತಾರ: ಒಂದು ದಂತಕಥೆ – ಅಧ್ಯಾಯ 1’ ಚಲನಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಇದೊಂದು ಅಪ್ಪಟ ಸುವರ್ಣಾವಕಾಶ. ಇದಕ್ಕಾಗಿ ನೀವು ಮಾಡಬೇಕಿರುವುದು ಇಷ್ಟೇ: 1. ಮೊದಲಿಗೆ, https://kantara.world ವೆಬ್‌ಸೈಟ್‌ಗೆ ಭೇಟಿ ನೀಡಿ. 2. ಅಲ್ಲಿ ನಿಮ್ಮ ಮಾಹಿತಿಯನ್ನು ನಮೂದಿಸಿ. 3. ನಂತರ, ನೀವು ನಿಮ್ಮ ಹೆಸರಿನಲ್ಲಿರುವ ವಿಶೇಷ ಟ್ರೇಲರ್ ಬಿಡುಗಡೆ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ಅದನ್ನು ಎಲ್ಲರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. 4. ಟ್ರೇಲರ್ ಬಿಡುಗಡೆ ಮಾಡಲು ಸೆಪ್ಟೆಂಬರ್ 22 ಸೋಮವಾರದಂದು ಮಧ್ಯಾಹ್ನ 12:35ಕ್ಕೆ ವೆಬ್‌ಸೈಟ್‌ಗೆ ಭೇಟಿ ನೀಡಿ ಎಂದು ನಟ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದರು.