BREAKING : ವಿಧಾನಸಭೆಯಲ್ಲಿ ‘ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ‘ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರವಾಗಿದೆ.

ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರವಾಗಿದ್ದು, ಈ ವಿಧೇಯಕಅಡಿ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ವಿನಾಯ್ತಿಗೆ ಅವಕಾಶ ನೀಡಲಾಗಿದೆ.ಈ ಮೂಲಕ 50 ಲಕ್ಷದಿಂದ 1 ಕೋಟಿ ರೂ.ಗೆ ಟೆಂಡರ್ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.

ಬಿಜೆಪಿ ಅವನತಿ ಕರ್ನಾಟಕದಿಂದ ಶುರುವಾಗಿದೆ : ಸಿಎಂ ಸಿದ್ದರಾಮಯ್ಯ

ಬಿಜೆಪಿ ಅವನತಿ ಕರ್ನಾಟಕದಿಂದ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಆದರೆ ಮೋದಿ ಅವರು ರೋಡ್ ಶೋ, ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಹಾಗೂ ಸುತ್ತ ಮುತ್ತಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಮತಗಳಿಂದ ಗೆಲುವು ಸಾಧಿಸಿತು. ಪ್ರಧಾನಿ ಮೋದಿ ಪ್ರಭಾವ ಮಂಕಾಗುತ್ತಿದೆ ಎಂಬುದಕ್ಕೆ ಇದೆಲ್ಲ ಉದಾಹರಣೆ. ಹಾಗಾಗಿ ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ಸಲಹೆ ನೀಡಿದ್ದಾರೆ.

ಇದೇ ವೇಳೆ ಪಂಪ ಮಹಾಕವಿ, ಬಸವಣ್ಣರ ಬಗ್ಗೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ಹಿಂದೆ ಪಂಪ ಎಂಬ ಕವಿ ಮನುಷ್ಯ ಜಾತಿ ತಾನೊಂದೇ ವಲಂ ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಪಂಪನಿಂದ ಹಿಡಿದು ಬಸವಣ್ಣನವರೆಗೂ ಮಹನೀಯರು ಸಮಾಜಕ್ಕೆ ಮಾದರಿಯಾಗಿದ್ದಾರೆ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಇದ್ದ. ಆತ ಮತಾಂಧ, ಮನುಷ್ಯ ವಿರೋಧಿ. ಆತನ ಹುಚ್ಚಾಟದಿಂದ ಮನುಷ್ಯರ ಮಾರಣ ಹೋಮಕ್ಕೆ ಕಾರಣವಾಗಿತ್ತು ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಾತು ಮುಂದುವರೆಸಿದ ಸಿಎಂ ಸಿದ್ದರಾಮಯ್ಯ, ಹಿಟ್ಲರ್ ಗೆ ಬೈದರೆ ನಿಮಗೇಕೆ ಕೋಪ? ಎಂದು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೆ ಕುಸಿಯುತ್ತಿದೆ, ಬಿಜೆಪಿ ಅವನತಿ ಕರ್ನಾಟಕದಿಂದಲೇ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ’ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಕ್ಷ ಗೆದ್ದಿದೆ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಯಾವತ್ತೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ’ ಎಂದರು.ನಾವು ವಿವಿಧ ಯೋಜನೆಗಳ ಮೂಲಕ ಜನರಿಗೆ ಹಣ ನೀಡುತ್ತೇವೆ. ಆದರೆ ಬಿಜೆಪಿಗರು ಜನರ ಜೇಬಿನಿಂದ ಹಣ ಕಿತ್ತುಕೊಂಡರು, ಬಿಜೆಪಿ 2 ಬಾರಿಯೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಮಯ್ಯ ವಾಗ್ಧಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read