HomeEntertainment'supplier ಶಂಕರ' ಚಿತ್ರದ ವಿಡಿಯೋ ಹಾಡು ರಿಲೀಸ್

‘supplier ಶಂಕರ’ ಚಿತ್ರದ ವಿಡಿಯೋ ಹಾಡು ರಿಲೀಸ್

ರಂಜಿತ್ ಸಿಂಗ್ ರಜಪೂತ್ ನಿರ್ದೇಶನದ ನಿಶ್ಚಿತ್ ಕೊರೋಡಿ ಅಭಿನಯದ ‘ಸಪ್ಲೇಯರ್ ಶಂಕರ’ ಚಿತ್ರದ ವಿಡಿಯೋ ಹಾಡು ನಿನ್ನೆ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ನೋಡುಗರಿಂದ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಬಾರ್ ಸಪ್ಲೈಯರ್ ಗಳ ಕುರಿತ ಈ ಹಾಡಿಗೆ ಸ್ಯಾಂಡಲ್ವುಡ್ನ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಆರ್ ಬಿ ಭರತ್ ಸಂಗೀತ ಸಂಯೋಜನೆ ನೀಡಿದ್ದಾರೆ. ನಿರ್ದೇಶಕ ರಂಜಿತ್ ಸಿಂಗ್ ಹಾಗೂ ಯೋಗಿ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರದಲ್ಲಿ ‘ಟಾಮ್ ಅಂಡ್ ಜೆರ್ರಿ’ ಸಿನಿಮಾ ಖ್ಯಾತಿಯ ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಗೋಪಾಲಕೃಷ್ಣನ್ ದೇಶ್ಪಾಂಡೆ, ನವೀನ್ ಡಿ ಪಡೀಲ್, ಜ್ಯೋತಿರಾಯ್, ಮತ್ತು ವಿಜಯ್ ವಿಶ್ವನಾಥ್ ಬಣ್ಣ ಹಚ್ಚಿದ್ದಾರೆ. ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ನಾಗೇಂದ್ರ ಸಿಂಗ್ ಹಾಗೂ ಚಂದ್ರಶೇಖರ್ ಬಂಡವಾಳ ಹೂಡಿದ್ದು, ಇದೇ ಫೆಬ್ರವರಿ ಎರಡರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ.

For Latest News Updates, Join Our Whatsapp Community🚩
RELATED ARTICLES

Most Popular