BIG NEWS : 107 ಅಡಿಗೆ ಕುಸಿದ ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್​ಎಸ್​  KRS ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಳೆ ಪ್ರಮಾಣ ಬಹಳ ಕಡಿಮೆಯಾದ ಹಿನ್ನೆಲೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ ಎಂದು ಹೇಳಲಾಗಿದೆ. ತಮಿಳುನಾಡು ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಂಡ್ಯದಲ್ಲಿಂದು ಮಹತ್ವದ ಸಭೆ ನಡೆಸಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಇಂದು 5 ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಮುಖಂಡರ ಸಭೆ ನಡೆಸಲಾಗುವುದು. ಬಿಜೆಪಿ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭಾಗವಹಿಸಲಿದ್ದಾರೆ.

ಕಾವೇರಿ ನದಿ ನೀರು ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ಕುರಿತು ಸಮಾಲೋಚನೆ ನಡೆಸಲಾಗುವುದು. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಯ ಬಿಜೆಪಿ ಪ್ರತಿನಿಧಿಗಳು, ಪರಾಜಿತ ಅಭ್ಯರ್ಥಿಗಳು ಮುಖಂಡರು ಭಾಗವಹಿಸಲಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read