ಎತ್ತಿನ ಹೊಳೆ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಎತ್ತಿನ ಹೊಳೆ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲನೇ ಹಂತ ಲೋಕಾರ್ಪಣೆ ಹಿನ್ನೆಲೆ ಇಂದು ಸಕಲೇಶಪುರದ ದೊಡ್ಡನಗರದ ಪಂಪ್ ಹೌಸ್’ನಲ್ಲಿ ಡಿಸಿಎಂ ಹಾಗೂ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಈ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದ್ದು, ಈ ಭಾಗದಲ್ಲಿ ಜಲ ಸಮೃದ್ಧಿಯಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಶಾಸಕರು, ಚುನಾಯಿತ ಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

https://twitter.com/DKShivakumar/status/1832010686093820304

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read