HomeLatest NewsBREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ –ರಾಮೇಶ್ವರಂ ರೈಲು ಸೇವೆ ಪುನಾರಂಭ

BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ –ರಾಮೇಶ್ವರಂ ರೈಲು ಸೇವೆ ಪುನಾರಂಭ

ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಪುನರಾರಂಭಿಸಲಾಗಿದೆ.

 ರೈಲು ಸಂಖ್ಯೆ 07355 ಎಸ್‌ಎಸ್‌ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 26, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 12, 2025 ರಿಂದ ಜೂನ್ 28, 2025 ರವರೆಗೆ ಪುನರಾರಂಭಿಸಲಾಗುತ್ತದೆ.

 ರೈಲು ಸಂಖ್ಯೆ 07356 ರಾಮೇಶ್ವರಂ – ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 27, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 13, 2025 ರಿಂದ ಜೂನ್ 29, 2025 ರವರೆಗೆ ಪುನರಾರಂಭಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೈಋತ್ಯ ರೈಲ್ವೆ, ಹುಬ್ಬಳ್ಳಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಾರ್ಯಾಚರಣೆಯ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಈ ಹಿಂದೆ ಸೂಚಿಸಲಾಗಿದ್ದ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಗಳನ್ನು ಈಗ ಮರುಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular