BIG NEWS : ಇಂದಿನಿಂದ ವಿಶ್ವವಿಖ್ಯಾತ ‘ಬೆಂಗಳೂರು ಕರಗ ಮಹೋತ್ಸವ’ ಆರಂಭ |Karaga

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ.
ಹೌದು, ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ರೋತ್ಸವ ಚೈತ್ರ ಪೂರ್ಣಿಮೆ ದಿನ ನಡೆಯಲಿದೆ. ಇಂದು ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿದ್ದು,. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.

ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ
.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ
ಏ.9 ರಂದು ಆರತಿ ದೀಪಗಳು
ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ
ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ
ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ
ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read