ಬೆಂಗಳೂರು : ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಎಂ.ಕೆ ದೊಡ್ಡಿಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್ ಮೃತರು ಎಂದು ಗುರುತಿಸಲಾಗಿದೆ.
ದೇವಸ್ಥಾನದ ಕಳ್ಳತನ ಕೇಸ್ ನಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಆಗಿತ್ತು. ಈ ಪ್ರಕರಣದಲ್ಲಿ ರಮೇಶ್, ಮಂಜು, ಕೋಲಾರ ಮೂಲದ ಅನಿಲ್ ರನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು.
ಬೆಳಗ್ಗೆ ಪೊಲೀಸ್ ಠಾಣೆಯ ಶೌಚಾಲಯಕ್ಕೆ ಹೋಗಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಸಂಬಂಧಿಕರು ಲಾಕಪ್ ಡೆತ್ ಆರೋಪ ಮಾಡಿದ್ದಾರೆ.
TAGGED:ಕಳ್ಳತನ
