HomeLatest NewsBREAKING : ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ.!

BREAKING : ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ.!

ಬೆಂಗಳೂರು : ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಎಂ.ಕೆ ದೊಡ್ಡಿಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್ ಮೃತರು ಎಂದು ಗುರುತಿಸಲಾಗಿದೆ.
ದೇವಸ್ಥಾನದ ಕಳ್ಳತನ ಕೇಸ್ ನಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಆಗಿತ್ತು. ಈ ಪ್ರಕರಣದಲ್ಲಿ ರಮೇಶ್, ಮಂಜು, ಕೋಲಾರ ಮೂಲದ ಅನಿಲ್ ರನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು.

ಬೆಳಗ್ಗೆ ಪೊಲೀಸ್ ಠಾಣೆಯ ಶೌಚಾಲಯಕ್ಕೆ ಹೋಗಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಸಂಬಂಧಿಕರು ಲಾಕಪ್ ಡೆತ್ ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular