ಕುಖ್ಯಾತ ಮನೆಗಳ್ಳನ ಬಂಧಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…?

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ಪೋಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ದೊಡ್ಡಕೊಕ್ಕನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಮುನಿ(30) ಬಂಧಿತ ಆರೋಪಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ನಿವಾಸಿಯಾಗಿರುವ ಮುನಿಯನ್ನು ಬಂಧಿಸಿದ ಪೊಲೀಸರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಒಂದು ಲಕ್ಷ ರೂಪಾಯಿ ನಗದು, ಬೈಕ್ ಜಪ್ತಿ ಮಾಡಿದ್ದಾರೆ.

ಆರೋಪಿ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ನಂದಿನಿ ಲೇಔಟ್, ಗಿರಿನಗರ, ಹನುಮಂತನಗರ, ಜ್ಞಾನಭಾರತಿ ಪೊಲೀಸ್ ಠಾಣೆಗಳ ಸುತ್ತಮುತ್ತ ಆರೋಪಿ ಕೃತ್ಯವೆಸಗಿದ್ದ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read