ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳವು ಮಾಡುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಅಪಹರಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.

ಜೀವನ್ ಅಲಿಯಾಸ್ ಜೀವ(30), ಆಶಾ(30) ಬಂಧಿತ ಆರೋಪಿಗಳು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಮೂಲದವರಾದ ಇವರನ್ನು ಬಂಧಿಸಿ 17 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ, 900 ಗ್ರಾಂ ಬೆಳ್ಳಿ ಜಪ್ತಿ ಮಾಡಲಾಗಿದೆ. ದರೋಡೆ, ಕೊಲೆ, ಕೊಲೆ ಯತ್ನ ಸೇರಿ ಅವರ ವಿರುದ್ಧ ಒಟ್ಟು 15 ಪ್ರಕರಣ ದಾಖಲಾಗಿವೆ.

2024ರ ಫೆಬ್ರವರಿ 13ರಂದು ಲಕ್ಷ್ಮಿಪುರದಲ್ಲಿ ವೃದ್ಧೆ ಭಾಗ್ಯಮ್ಮ ಅವರನ್ನು ಕೊಲೆ ಮಾಡಲಾಗಿತ್ತು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮಿಪುರದಲ್ಲಿ ಕೊಲೆಯ ಬಳಿಕ ಸಂಪ್ ನಲ್ಲಿ ಮೃತದೇಹ ಹಾಕಿ ದಂಪತಿ ಪರಾರಿಯಾಗಿದ್ದರು.

ಕೇಂದ್ರವಲಯ ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತಾವರೆಕೆರೆ ಇನ್ಸ್ಪೆಕ್ಟರ್ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹೊಸಕೋಟೆ ಸಮೀಪ ಮತ್ತೊಂದು ಕೃತ್ಯವೆಸಗುವ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಜೀವನ್ ಬೇಕರಿಯಲ್ಲಿ ತಿಂಡಿ ತಯಾರಿಸುವ ಕೆಲಸ ಮಾಡುತ್ತಿದ್ದ. ಒಂಟಿ ಮಹಿಳೆಯರು ವಾಸಿಸುತ್ತಿದ್ದ ಸ್ಥಳವನ್ನು ಪತ್ನಿ ಆಶಾ ಗುರುತಿಸುತ್ತಿದ್ದಳು. ಸ್ಥಳ ಗುರುತಿಸಿ ಪತಿ ಜೀವನ್ ಜೊತೆಗೆ ತೆರಳಿ ಕೃತ್ಯವೆಸಗುತ್ತಿದ್ದಳು. ಜುವೆಲ್ಲರಿ ಅಂಗಡಿಗೆ ತೆರಳಿ ಕಷ್ಟ ಇದೆ ಎಂದು ಹೇಳುತ್ತಿದ್ದ ದಂಪತಿ ಕದ್ದ ಚಿನ್ನಾಭರಣವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read