HomeKarnatakaಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್

ಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗ: ಮನೆಯಲ್ಲಿದ್ದ ಅತ್ತೆಯ ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿ ಇಬ್ಬರನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮಳಲಕೊಪ್ಪ ಗ್ರಾಮದ ರೇಣುಕಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಯ ಬೀರುವಿನಲ್ಲಿದ್ದ 4.30 ಲಕ್ಷ ರೂಪಾಯಿ ಮೌಲ್ಯದ 90 ಗ್ರಾಂ ಚಿನ್ನಾಭರಣ 2,050 ರೂ. ನಗದು ದೋಚಲಾಗಿತ್ತು. ಸೊಸೆ ಹೇಮಾವತಿ(23) ಹಾಗೂ ಅದೇ ಗ್ರಾಮದ ಎದುರುಮನೆಯ ಸತೀಶ್(22) ಚಿನ್ನಾಭರಣ ಕಳವು ಮಾಡಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳವು ಮಾಡಿದ್ದ ಚಿನ್ನಾಭರಣ ಮತ್ತು ನಗದು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಪಿ. ಕೆ, ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ. ಬಾಲರಾಜು, ತುಂಗಾನಗರ ಠಾಣೆ ಪಿಐ ಬಿ. ಮಂಜುನಾಥ್ ನೇತೃತ್ವದಲ್ಲಿ ತುಂಗಾನಗರ ಠಾಣೆ ಪೊಲೀಸರು ಕಳವು ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular