HomeLatest Newsಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಉಪನ್ಯಾಸಕಿಗೆ ಕಲ್ಯಾಣ ಮಂಟಪಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುವ ಗೀಳು: ಕನ್ನಡ...

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಉಪನ್ಯಾಸಕಿಗೆ ಕಲ್ಯಾಣ ಮಂಟಪಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುವ ಗೀಳು: ಕನ್ನಡ ಪ್ರೊಫೆಸರ್ ಅರೆಸ್ಟ್!

ಬೆಂಗಳೂರು: ಈ ಮಹಿಳೆಗೆ ಅದೆಂತಹ ಖಯಾಲಿ ನೋಡಿ. ಉದ್ಯೋಗದಲ್ಲಿ ಕಾಲೇಜು ಪ್ರೊಫೆಸರ್ ಆಗಿದ್ದರೂ ಕಲ್ಯಾಣ ಮಂಟಪಗಳಿಗೆ ತೆರಳಿ ಮದುವೆ ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗುವುದನ್ನು ಹವ್ಯಾಸ ಮಾಡಿಕೊಂಡು ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ವಾರಪೂರ್ತಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಮಹಿಳೆ, ವೀಕೆಂಡ್ ಗಳಲ್ಲಿ ಬೆಂಗಳೂರಿನ ವಿವಿಧ ಕಲ್ಯಾಣ ಮಂಟಪಗಳಲ್ಲಿ ನಡೆಯುವ ಮದುವೆಗೆ ಹೋಗಿ ಸಂಬಂಧಿಕರಂತೆ ವರ್ತಿಸಿ ಚಿನ್ನಾಭರಣಗಳನ್ನು ಕದ್ದು ಎಕೇಪ್ ಆಗುತ್ತಿದ್ದಳು. ಕನ್ನಡ ಪ್ರೊಫೆಸರ್ ರೇವತಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ರೇವತಿ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ವಾಸವಾಗಿದ್ದಳು. ಬೆಳ್ಳಂದೂರು ಬಳಿಕ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಳು. ವಾರಪೂರ್ತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುವುದರಲ್ಲಿ ಬ್ಯುಸಿ ಇರುತ್ತಿದ್ದ ರೇವತಿ, ವೀಕೆಂಡ್ ಬಂತೆಂದರೆ ಕಲ್ಯಾಣ ಮಂಟಪಗಳಿಗೆ ತೆರಳಿ ಯಾರಿಗೂ ಅನುಮಾನ ಬಾರದಂತೆ ಎಲ್ಲರನ್ನೂ ಚನ್ನಾಗಿ ಮಾತನಾಡಿಸುತ್ತ ಸಂಬಂಧಿಕರಂತೆ ವರ್ತಿಸಿ, ಹೊಟ್ಟೆ ತುಂಬಾ ಊಟ ಸವಿದು ಮದುವೆಗೆ ಬಂದಿದ್ದವರ ಚಿನ್ನಾಭರಣ ದೋಚುತ್ತಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದೆ ಬಸವನಗುಡಿಯ ದ್ವಾರಕಾನಾಥ್ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಮದುವೆಗೆ ಹೋಗಿದ್ದ ರೇವತಿ, ಅಲ್ಲಿ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಳು. ಆಭರಣ ಕಳೆದುಕೊಂಡವರು ಬಸವನಗುಡಿ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರೊಫೆಸರ್ ರೇವತಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮೂರು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. 32 ಲಕ್ಷ ಮೌಲ್ಯದ 262 ಗ್ರಾಂ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular