ಚಾಮರಾಜನಗರ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಚಿನ್ನಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಚಾಮರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೀಲಾ ಬಂಧಿತ ಕಳ್ಳಿ. ಆಭರಣ ಖರೀದಿಸುವ ನೆಪದಲ್ಲಿ ಚಿನ್ನದಂಗಡಿಗಳಿಗೆ ಬರುತ್ತಿದ್ದಳು, ಅಂಗಡಿಯ ಸಿಬ್ಬಂದಿಗಳ ಕಣ್ತಪ್ಪಿಸಿ ಚಿನ್ನದ ಸರ ಕದ್ದು ಎಸ್ಕೇಪ್ ಆಗುತ್ತಿದ್ದಳು, ಚಾಮರಾಜನಗರದಲ್ಲಿ 9 ಗ್ರಾಂ ಚಿನ್ನ ಹಾಗೂ ಪಿರಿಯಾಪಟ್ಟಣದಲ್ಲಿ 5 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿದ್ದಳು.
ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಕಳ್ಳಿಯನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.