ಮೊಬೈಲ್ ಅಲ್ಲ, ಟವರ್ ಅನ್ನೇ ಕದ್ದ ಕಳ್ಳರು…!

ಶಿವಮೊಗ್ಗ: ಸಾಮಾನ್ಯವಾಗಿ ಮೊಬೈಲ್ ಫೋನ್ ಕಳವು ಮಾಡುವುದನ್ನು ನೋಡಿರುತ್ತೀರಿ. ಆದರೆ, ಕಳ್ಳರು ಶಿವಮೊಗ್ಗದಲ್ಲಿ ಮೊಬೈಲ್ ಫೋನ್ ನೆಟ್ವರ್ಕ್ ಟವರ್ ಅನ್ನೇ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಟಿಪ್ಪು ನಗರದ ಖಾಲಿ ನಿವೇಶನದಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಯೊಂದು 2008 ರಲ್ಲಿ ಮೊಬೈಲ್ ಫೋನ್ ನೆಟ್ವರ್ಕ್ ಟವರ್ ಅಳವಡಿಸಿತ್ತು. ಕೊರೋನಾ ನಂತರ ಟವರ್ ನಿರ್ವಹಣೆ ಮಾಡಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಖಾಸಗಿ ಸಂಸ್ಥೆಯ ಸಿಬ್ಬಂದಿ ಸ್ಥಳಕ್ಕೆ ಬಂದು ನೋಡಿದಾಗ ಮೊಬೈಲ್ ಟವರ್ ಸ್ಥಳದಲ್ಲಿ ಇರಲಿಲ್ಲ.

ಈ ಬಗ್ಗೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದು, ಕೋರ್ಟ್ ಸೂಚನೆಯಂತೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 46.30 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಠಾಣೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read