BIG NEWS : ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರು, ಬೆಂಗಳೂರಲ್ಲೇ ಅತಿ ಹೆಚ್ಚು : ‘RCH’ ಶಾಕಿಂಗ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರಿದ್ದು, ಬೆಂಗಳೂರಲ್ಲೇ ಅತಿ ಹೆಚ್ಚು ಬಾಲ ಗರ್ಭಿಣಿಯರಿದ್ದಾರೆ ಎಂದು RCH ( ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ) ಪೋರ್ಟಲ್ ಶಾಕಿಂಗ್ ಮಾಹಿತಿ ನೀಡಿದೆ.

ಹೌದು. ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರಲ್ಲಿ 2815 ಬಾಲಗರ್ಭಿಣಿಯರು ಇದ್ದಾರೆ, ಬೆಳಗಾವಿ ಜಿಲ್ಲೆಯಲ್ಲಿ 2,255 ಮಂದಿ ಗರ್ಭಿಯರಿದ್ದು, ವಿಜಯಪುರ ಜಿಲ್ಲೆಯಲ್ಲಿ 2004 ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಡಿಮೆ ಅಂದರೆ 56 ಪ್ರಕರಣಗಳು ಬೆಳಕಿಗೆ ಬಂದಿದೆ. 2023ರ ಜನವರಿಯಿಂದ ನವೆಂಬರ್ ವರೆಗಿನ 11 ತಿಂಗಳಲ್ಲಿ ರಾಜ್ಯದ 28,657 ಬಾಲಕಿಯರು ಗರ್ಭಿಣಿಯರು ಆಗಿದ್ದಾರೆ.

ಬಾಲಕಿಯರು ಗರ್ಭಿಣಿ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪೋಕ್ಸೆ ಕಾಯ್ದೆ 2012 ಸೆಕ್ಷನ್ 19ರಡಿ ಪೊಲೀಸ್ ಠಾಣೆಗೆ ದೂರು ನೀಡಬೇಕಿತ್ತು. ಆದರೆ, ಈ ಕೆಲಸ ನಡೆದಿಲ್ಲ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ  ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಲ್ಯ ವಿವಾಹವಾಗುವ ಬಾಲಕಿಯರಿಗೆ ಹಲವು ಸ್ವರೂಪಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಗರ್ಭಿಣಿಯರಾದರೆ ರಕ್ತಹೀನತೆ ಮತ್ತು ಪೌಷ್ಟಿಕಾಂಶದ ಕೊರತೆ ತಲೆದೋರುತ್ತದೆ. ತಾಯಿ ಮತ್ತು ಮಗು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read