HomeKarnatakaರಾಜಕೀಯ ಪಿತೂರಿಯ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಯತ್ನ ನಡೆಯುತ್ತಿದೆ : DCM ಡಿಕೆ ಶಿವಕುಮಾರ್

ರಾಜಕೀಯ ಪಿತೂರಿಯ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಯತ್ನ ನಡೆಯುತ್ತಿದೆ : DCM ಡಿಕೆ ಶಿವಕುಮಾರ್

ಬೆಂಗಳೂರು : ರಾಜಕೀಯ ಪಿತೂರಿಯ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರದ ವಿರುದ್ಧ ಇಂದು ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜಭವನದ ಮೂಲಕ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನ ನಡೆಯುತಿದ್ದು, ಕ್ಷುಲ್ಲಕ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಜಕೀಯ ಪಿತೂರಿಯ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಹಾಗೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದು, ಸತ್ಯದ ಹಾದಿಯಲ್ಲಿ ನಡೆಯುತ್ತಿರುವ ನಮಗೆ ಯಾವುದೇ ಭಯವಿಲ್ಲ. ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular