HomeKarnatakaBIG NEWS : ನಾವು ಎಲ್ಲಿದ್ದೇವೆ ಎಂಬ ಅನುಮಾನ ಇದೆ : ನಾಗಮಂಗಲ ಗಲಭೆ ಪ್ರಕರಣಕ್ಕೆ...

BIG NEWS : ನಾವು ಎಲ್ಲಿದ್ದೇವೆ ಎಂಬ ಅನುಮಾನ ಇದೆ : ನಾಗಮಂಗಲ ಗಲಭೆ ಪ್ರಕರಣಕ್ಕೆ H.D ಕುಮಾರಸ್ವಾಮಿ ಖಂಡನೆ..!

 ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ. ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ.

ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular