HomeKarnatakaಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಗುಡುಗು

ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಗುಡುಗು

ಬೆಂಗಳೂರು : ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

 ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ Indian National Congress ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?

2006ರಲ್ಲಿ BJP Karnataka ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು Janata Dal Secular ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??

ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular