HomeLatest NewsBIG NEWS : ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ , ಹೈಕಮಾಂಡ್ ಹೇಳಿದಂತೆ ಕೇಳ್ತೇವೆ...

BIG NEWS : ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ , ಹೈಕಮಾಂಡ್ ಹೇಳಿದಂತೆ ಕೇಳ್ತೇವೆ : CM-DCM ಒಗ್ಗಟ್ಟಿನ ಸಂದೇಶ.!

ಬೆಂಗಳೂರು : ನಾವಿಬ್ಬರು ಚೆನ್ನಾಗಿದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ಹೇಳಿದಂತೆ ನಾವು ಕೇಳುತ್ತವೆ. 2028 ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ಇದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಒಗ್ಗಟ್ಟಿನ ಸಂದೇಶ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಕಾವೇರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.ನಾನು ಡಿಕೆ ಶಿವಕುಮಾರ್, ಪೊನ್ನಣ್ಣ ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೆವು. ಅಲ್ಲಿ ಬೇರೆ ಏನೂ ಮಾತನಾಡಲಿಲ್ಲ ಎಂದರು. ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣ ಆಗಿದೆ. ನಾವಿಬ್ಬರು ಕೂತು ಮಾತನಾಡಿದ್ದೆವು. 2023 ರಲ್ಲಿ ನಾವು ಹೇಗೆ ಒಟ್ಟಿಗೆ ಕೆಲಸ ಮಾಡಿದ್ವೋ ಅದೇ ರೀತಿ ಮುಂದೆ ಕೆಲಸ ಮಾಡುತ್ತೀನಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಳ್ಳು ಅಪವಾದ ಮಾಡುವ ಜೆಡಿಎಸ್ –ಬಿಜೆಪಿ ಚಾಳಿ. ಇದನ್ನ ನಾವು ಬಹಳ ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕೆ ಬೇಕಾದ ತಂತ್ರಗಳನ್ನ ರೂಪಿಸಿದ್ದೇವೆ ಎಂದರು. ನಾಳೆಯಿಂದ ಯಾವುದೇ ಗೊಂದಲ್ಲ ಇರಲ್ಲ ಎಂದು ಕುರ್ಚಿ ಕದನಕ್ಕೆ ತೆರೆ ಎಳದಿದ್ದಾರೆ.

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ.ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ವಿಧಾನಸಭೆ ಅಧಿವೇಶನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ. ನಮ್ಮದು ಒಂದೇ ಗುಂಪು, ಹೈಕಮಾಂಡ್ ಗುಂಪು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 2028ಕ್ಕೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಕಾರ್ಯಕ್ರಮ ರೂಪಿಸಿದ್ದೇವೆ. ಅದಕ್ಕಾಗಿ ಒಮ್ಮತದಿಂದ ಆಡಳಿತ ಮಾಡಿಕೊಂಡು ಹೋಗುತ್ತೇವೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular