ಬಿಜೆಪಿ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ-CM ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ   ಬಿಜೆಪಿ ಜನರ ಆಶೀರ್ವಾದದಿಂದ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ.  ಭ್ರಷ್ಟ ಹಣದಲ್ಲಿ ಶಾಸಕರನ್ನು ಖರೀದಿ ಮಾಡಿ ಸರ್ಕಾರ ಬೀಳಿಸುವುದು ಮಾತ್ರ ಅವರಿಗೆ ಗೊತ್ತು ಎಂದರು.

ಬಿಜೆಪಿ ನಾಯಕರಿಗೆ ರಾಷ್ಟ್ರಧ್ವಜದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ.ತ್ರಿವರ್ಣಧ್ವಜ ಹಾರಿಸುವುದಾಗಿ ಅನುಮತಿ ಪಡೆದು ಸರ್ಕಾರಿ ಜಾಗದಲ್ಲಿ ಹನುಮಧ್ವಜ ಹಾರಿಸಿದ್ದಾರೆ. ಇವರೆಲ್ಲ ದೇಶಭಕ್ತರೇ? ಭಾರತೀಯರೇ? ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read