ಗುಂಡಿಗೆ ಹಿಡಿ ಮಣ್ಣು ಹಾಕಲೂ ದುಡ್ಡಿಲ್ಲ, ಸುರಂಗಕ್ಕೆ ಸಾವಿರಾರು ಕೋಟಿ: ‘ಗ್ರೇಟರ್ ಬೆಂಗಳೂರು’ ಹೆಚ್ಚು ಮಳೆಯಾದ್ರೆ ಮುಳುಗುತ್ತೆ, ಕಡಿಮೆ ಮಳೆಯಾದ್ರೆ ತೇಲುತ್ತೆ: HDK

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ. ಕಡಿಮೆ ಸುರಿದರೆ ತೇಲುತ್ತದೆ. ರಸ್ತೆಗಳಲ್ಲಿಯೇ ಕೆರೆ, ಚರಂಡಿ. ಗುಂಡಿಗೆ ಹಿಡಿ ಮಣ್ಣು ಹಾಕೋದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ರೂ. ಟೆಂಡರ್.

ಹೀಗೆಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಮಳೆ ನೀರಿನಿಂದ ಬೆಂಗಳೂರು ನಗರದ ಹಲವೆಡೆ ಜಲಾವೃತವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಗ್ರೇಟರ್ ಬೆಂಗಳೂರು!?

ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ!

ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು!

ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ!

ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!?

ನಾಡು ಎಂದರೆ ಕಲ್ಲು ಬಂಡೆಗಳಲ್ಲ,

ನಾಡು ಎಂದರೆ ಮನುಷ್ಯರು.

ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ?

ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ!

ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ?

ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ?

ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ?

ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು?

ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ.

ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು!

ಗ್ರೇಟರ್ ಬೆಂಗಳೂರು ಅಲ್ಲ,

ಲೂಟರ್’ಗಳ ಬೆಂಗಳೂರು!”

ಹೀಗೆಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read